ಆಮೇಲೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ--
21ನಮ್ಮ ಸೆರೆಯ ಹನ್ನೆರಡನೇ ವರುಷದ ಹತ್ತನೇ ತಿಂಗಳಿನ ಐದನೇ ದಿನದಲ್ಲಿ ಆದದ್ದೇನಂದರೆ, ಯೆರೂಸ ಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು ಪಟ್ಟಣವು ಹೊಡೆಯಲ್ಪಟ್ಟಿದೆ ಎಂದು ಹೇಳಿದನು.
22ಆಗ ಅವನು ತಪ್ಪಿಸಿಕೊಂಡು ಬರುವ ದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ಕರ್ತನ ಕೈ ನನ್ನ ಮೇಲೆ ಇತ್ತು. ಅವನು ಮುಂಜಾನೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿದೆ; ನನ ಬಾಯಿ ತೆರೆದಿತ್ತು. ನಾನು ಮೂಕನಾಗಿರಲಿಲ್ಲ.
23ಆಮೇಲೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ--
24ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು-- ಅಬ್ರಹಾಮನೇ ಒಬ್ಬನಾಗಿದ್ದು ದೇಶವನ್ನು ಸ್ವತಂತ್ರಿಸಿ ಕೊಂಡನು, ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳುತ್ತಾರೆ.
25ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುವರ ಲ್ಲವೇ? ನಿಮ್ಮ ಕಣ್ಣುಗಳು ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವ ನೀವು ದೇಶವನ್ನು ಸ್ವಾಧೀನಪಡಿಸಿ ಕೊಳ್ಳುವಿರೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ