ಆದಿಕಾಂಡ 47:23

ಆಗ ಯೋಸೇಫನು ಜನರಿಗೆ--ಇಗೋ, ಇಂದು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಗೋ, ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜಬಿತ್ತಿರಿ.

ಸಂದರ್ಭದೊಂದಿಗೆ ಓದಿ · ಆದಿಕಾಂಡ 47

21ಹೀಗೆ ಭೂಮಿಯು ಫರೋಹನದಾಯಿತು. ಅವನು ಜನರನ್ನು ಐಗುಪ್ತದ ಒಂದು ಮೇರೆಯಿಂದ ಇನ್ನೊಂದು ಮೇರೆಯ ವರೆಗೆ ಇದ್ದ ಪಟ್ಟಣಗಳಲ್ಲಿ ಸೇರಿಸಿದನು.

22ವೈದಿಕರ ಭೂಮಿಯನ್ನು ಮಾತ್ರ ಅವನು ಕೊಂಡು ಕೊಳ್ಳಲಿಲ್ಲ. ಯಾಕಂದರೆ ಫರೋಹನು ವೈದಿಕರಿಗೆ ಭಾಗಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು ಅವರು ಊಟಮಾಡುತ್ತಿದ್ದರು; ಆದ ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ.

23ಆಗ ಯೋಸೇಫನು ಜನರಿಗೆ--ಇಗೋ, ಇಂದು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಗೋ, ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜಬಿತ್ತಿರಿ.

24ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ನಾಲ್ಕು ಪಾಲು ಹೊಲದ ಬೀಜಕ್ಕಾ ಗಿಯೂ ನಿಮ್ಮ ಆಹಾರಕ್ಕಾಗಿಯೂ ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ ಅಂದನು.

25ಆಗ ಅವರು--ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ಕೃಪೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು ಅಂದರು.

ಆದಿಕಾಂಡ 47 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी