ಆತನು ಹೇಳಿದ್ದೇನಂದರೆ--ಒಬ್ಬ ಮನುಷ್ಯನು ಬೀಜವನ್ನು ಭೂಮಿಯಲ್ಲಿ ಹಾಕಿದಂತೆಯೇ ದೇವರ ರಾಜ್ಯವು ಇದೆ.
24ಆತನು ಅವರಿಗೆ--ನೀವು ಕೇಳುವದರಲ್ಲಿ ಎಚ್ಚರವಾಗಿರ್ರಿ; ನೀವು ಯಾವ ಅಳತೆಯಿಂದ ಅಳೆಯುತ್ತೀರೋ ಅದು ನಿಮಗೂ ಅಳೆಯಲ್ಪಡುವದು; ಮತ್ತು ಕೇಳುವವ ರಾದ ನಿಮಗೆ ಹೆಚ್ಚಾಗಿ ಕೊಡಲ್ಪಡುವದು.
25ಯಾಕಂ ದರೆ ಯಾವನಿಗೆ ಇದೆಯೋ ಅವನಿಗೆ ಕೊಡಲ್ಪಡುವದು; ಯಾವನಿಗೆ ಇಲ್ಲವೋ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು ಎಂದು ಹೇಳಿದನು.
26ಆತನು ಹೇಳಿದ್ದೇನಂದರೆ--ಒಬ್ಬ ಮನುಷ್ಯನು ಬೀಜವನ್ನು ಭೂಮಿಯಲ್ಲಿ ಹಾಕಿದಂತೆಯೇ ದೇವರ ರಾಜ್ಯವು ಇದೆ.
27ಅವನು ರಾತ್ರಿ ಮಲಗುತ್ತಾ ಹಗಲು ಏಳುತ್ತಾ ಇರುವಾಗ ಹೇಗೆ ಆ ಬೀಜವು ಮೊಳೆತು ಬೆಳೆಯುವದೆಂದು ಅವನಿಗೆ ಗೊತ್ತಾಗುವದಿಲ್ಲವೋ ಹಾಗೆಯೇ ಇರುವದು.
28ಯಾಕಂದರೆ ಭೂಮಿಯು ಮೊದಲು ಮೊಳಕೆಯನ್ನು ಆಮೇಲೆ ತೆನೆಯನ್ನು ಇದಾದ ಮೇಲೆ ತೆನೆಯಲ್ಲಿ ಪೂರ್ಣಕಾಳನ್ನು ತನ್ನಷ್ಟಕ್ಕೆ ತಾನೇ ಫಲಿಸುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ