ಮಲಾಕಿಯ 2:11

ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ; ಇಸ್ರಾಯೇಲಿನ ಲ್ಲಿಯೂ ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ. ಕರ್ತನು ಪ್ರೀತಿ ಮಾಡಿದ ಪರಿಶುದ್ಧವಾ ದದ್ದನ್ನು ಯೆಹೂದವು ಅಪವಿತ್ರಮಾಡಿ ಅನ್ಯ ದೇವರ ಮಗಳನ್ನು ಮದುವೆ ಮಾಡಿಕೊಂಡಿದೆ.

ಸಂದರ್ಭದೊಂದಿಗೆ ಓದಿ · ಮಲಾಕಿಯ 2

9ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ, ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ.

10ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬನೇ ದೇವರು ಸೃಷ್ಟಿಸಿದನಲ್ಲವೋ? ಯಾಕೆ ಪ್ರತಿ ಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಿಂದ ನಡೆದು ನಮ್ಮ ತಂದೆಗಳ ಒಡಂಬಡಿಕೆ ಯನ್ನು ಅಪವಿತ್ರ ಮಾಡುತ್ತೇವೆ?

11ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ; ಇಸ್ರಾಯೇಲಿನ ಲ್ಲಿಯೂ ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ. ಕರ್ತನು ಪ್ರೀತಿ ಮಾಡಿದ ಪರಿಶುದ್ಧವಾ ದದ್ದನ್ನು ಯೆಹೂದವು ಅಪವಿತ್ರಮಾಡಿ ಅನ್ಯ ದೇವರ ಮಗಳನ್ನು ಮದುವೆ ಮಾಡಿಕೊಂಡಿದೆ.

12ಇದನ್ನು ಮಾಡುವ ಮನುಷ್ಯನನ್ನು ಅಂದರೆ, ಯಜಮಾನನನ್ನು ಜ್ಞಾನಿಯನ್ನು ಸೈನ್ಯಗಳ ಕರ್ತನಿಗೆ ಕಾಣಿಕೆ ಅರ್ಪಿಸುವ ವನನ್ನು ಕರ್ತನು ಯಾಕೋಬಿನ ಗುಡಾರಗಳೊಳಗಿಂದ ತೆಗೆದುಬಿಡುವನು.

13ನೀವು ತಿರಿಗಿ ಇದನ್ನು ಮಾಡಿ ದ್ದೀರಿ, ಕರ್ತನ ಬಲಿಪೀಠಗಳನ್ನು ಕಣ್ಣೀರುಗಳಿಂದಲೂ ಅಳುವಿಕೆಯಿಂದಲೂ ಕೂಗುವಿಕೆಯಿಂದಲೂ ಮುಚ್ಚಿ ದ್ದೀರಿ; ಆದದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷ್ಯ ಮಾಡದೆ ಅದನ್ನು ಮೆಚ್ಚಿಕೆಯಾದದ್ದೆಂದು ನಿಮ್ಮ ಕೈಯಿಂದ ಅಂಗೀಕರಿಸುವದಿಲ್ಲ.

ಮಲಾಕಿಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी