ಯಾಜಕಕಾಂಡ 26:3

ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳಂತೆ ಮಾಡಿದರೆ

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 26

1ನೀವು ನಿಮಗಾಗಿ ವಿಗ್ರಹಗಳನ್ನಾಗಲಿ ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ; ನಿಲ್ಲಿಸುವ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ. ಕಲ್ಲಿನ ವಿಗ್ರಹಗಳನ್ನಾಗಲಿ ನಿಮ್ಮ ದೇಶದಲ್ಲಿಟ್ಟು ಕೊಂಡು ಅವುಗಳಿಗೆ ಅಡ್ಡ ಬೀಳಬೇಡಿರಿ. ನಿಮ್ಮ ದೇವರಾಗಿರುವ ಕರ್ತನು ನಾನೇ.

2ನನ್ನ ಸಬ್ಬತ್ತುಗಳನ್ನು ನೀವು ಆಚರಿಸಬೇಕು; ನನ್ನ ಪರಿಶುದ್ಧ ಸ್ಥಳಕ್ಕೆ ಭಯಪಡ ಬೇಕು. ನಾನೇ ಕರ್ತನು.

3ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳಂತೆ ಮಾಡಿದರೆ

4ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು.

5ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.

ಯಾಜಕಕಾಂಡ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी