ಯೆಶಾಯ 38:15

ನಾನು ಏನು ಹೇಳಲಿ; ಆತನು ನನಗೆ ಮಾತುಕೊಟ್ಟು ತಾನೇ ಅದನ್ನು ನೆರವೇರಿಸಿ ದ್ದಾನೆ. ನನ್ನ ಆತ್ಮಕ್ಕೆ ಸಂಭವಿಸಿದ ದುಃಖದಲ್ಲಿ ನನ್ನ ವರುಷಗಳಲ್ಲೆಲ್ಲಾ ಮೆಲ್ಲಗೆ ನಡೆಯುವೆನು.

ಸಂದರ್ಭದೊಂದಿಗೆ ಓದಿ · ಯೆಶಾಯ 38

13ಆತನು ಸಿಂಹದಂತೆ ಎಲುಬುಗಳನ್ನೆಲ್ಲಾ ಮುರಿದಿದ್ದಾಗ್ಯೂ ಬೆಳಗಿನ ವರೆಗೂ ತಾಳಿಕೊಂಡೇ ಇದ್ದೆನು; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ.

14ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು ಪಾರಿವಾಳದಂತೆ ಮೂಲುಗುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವದರಿಂದ ಕ್ಷೀಣವಾದವು. ಓ ಕರ್ತನೇ, ನಾನು ಬಾಧೆಪಡುತ್ತಿದ್ದೇನೆ; ನೀನು ನನಗೆ ಆಶ್ರಯನಾಗು.

15ನಾನು ಏನು ಹೇಳಲಿ; ಆತನು ನನಗೆ ಮಾತುಕೊಟ್ಟು ತಾನೇ ಅದನ್ನು ನೆರವೇರಿಸಿ ದ್ದಾನೆ. ನನ್ನ ಆತ್ಮಕ್ಕೆ ಸಂಭವಿಸಿದ ದುಃಖದಲ್ಲಿ ನನ್ನ ವರುಷಗಳಲ್ಲೆಲ್ಲಾ ಮೆಲ್ಲಗೆ ನಡೆಯುವೆನು.

16ಓ ಕರ್ತನೇ, ಇಂಥಾ ಸಂಬಂಧಗಳಿಂದ ಮನುಷ್ಯರು ಬದುಕುತ್ತಾರೆ, ಇವೆಲ್ಲವುಗಳಿಂದಲೇ ನನ್ನ ಆತ್ಮದಲ್ಲಿ ಜೀವವುಂಟು, ಹೀಗೆ ನನ್ನನ್ನು ನೀನು ಸ್ವಸ್ಥಮಾಡಿ ಬದುಕುವಂತೆ ಮಾಡಿದಿ.

17ಇಗೋ, ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.

ಯೆಶಾಯ 38 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी