೧ ಅರಸುಗಳು 10:27

ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳ ಹಾಗೆಯೂ ದೇವದಾರುಗಳನ್ನು ತಗ್ಗಿನಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿ ದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 10

25ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು.

26ಇದಲ್ಲದೆ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನಿಗೆ ಸಾವಿರದ ನಾನೂರು ರಥಗಳೂ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ತಾನು ಇರಿಸಿದ ಹನ್ನೆರಡು ಸಾವಿರ ಕುದುರೆಯ ರಾಹುತರೂ ಇದ್ದರು.

27ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳ ಹಾಗೆಯೂ ದೇವದಾರುಗಳನ್ನು ತಗ್ಗಿನಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿ ದನು.

28ಇದಲ್ಲದೆ ಸೊಲೊಮೋನನಿಗೆ ಐಗುಪ್ತ ದಿಂದ ಕುದುರೆಗಳೂ ಸಣಬಿನ ನೂಲು ತರಲ್ಪಟ್ಟವು. ಅರಸನ ವರ್ತಕರು ಕ್ರಯಕ್ಕೆ ಸಣಬಿನ ನೂಲನ್ನು ತೆಗೆದುಕೊಂಡರು.

29ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು.

೧ ಅರಸುಗಳು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी