ಯೆಹೆಜ್ಕೇಲನು 23:16

ಅವಳು ಅವಳ ಕಣ್ಣುಗಳಿಂದ ತಕ್ಷಣವೇ ಅವರನ್ನು ನೋಡಿದಾಗ ಅವರನ್ನು ಮೋಹಿಸಿ ದಳು; ಅವರ ಬಳಿಗೆ ಕಸ್ದೀಯಕ್ಕೆ ದೂತರನ್ನು ಕಳುಹಿಸಿ ದಳು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 23

14ಅವಳು ತನ್ನ ವ್ಯಭಿಚಾರವನ್ನು ಇನ್ನು ಹೆಚ್ಚಿಸಿದಳು; ಗೋಡೆಯ ಮೇಲೆ ಬರೆಯಲ್ಪಟ್ಟ ಮನುಷ್ಯರನ್ನೂ ಕುಂಕುಮ ಇಟ್ಟುಕೊಂಡ ಕಸ್ದೀಯರ ಹಾಗೆ ಕಂಡು ಬರುವ ಪ್ರತಿಮೆಗಳನ್ನೂ (ಮನುಷ್ಯ ಆಕಾರಗಳನ್ನೂ) ನೋಡಿದಾಗ,

15ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ ಕೊಂಡಂಥ ತನ್ನ ತಲೆಗಳಲ್ಲಿ ಅಲಂಕಾರವಾದ ರುಮಾ ಲನ್ನು ಧರಿಸಿದಂಥ ಎಲ್ಲರೂ ನೋಟದಲ್ಲಿ ಅವರ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಕುಮಾರರ ಹಾಗಿರುವದನ್ನು;

16ಅವಳು ಅವಳ ಕಣ್ಣುಗಳಿಂದ ತಕ್ಷಣವೇ ಅವರನ್ನು ನೋಡಿದಾಗ ಅವರನ್ನು ಮೋಹಿಸಿ ದಳು; ಅವರ ಬಳಿಗೆ ಕಸ್ದೀಯಕ್ಕೆ ದೂತರನ್ನು ಕಳುಹಿಸಿ ದಳು.

17ಬಾಬೆಲಿನವರು ಅವಳ, ಪ್ರೀತಿಯ ಹಾಸಿ ಗೆಯ ಮೇಲೆ ಬಂದು ಅವಳನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು; ಅವಳು ಅವರಿಂದ ಹಾಳಾದ ಮೇಲೆ ತನ್ನ ಮನಸ್ಸನ್ನು ಅವರ ಕಡೆಯಿಂದ ಅಗಲಿಸಿ ಕೊಂಡಳು.

18ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನು ಬಯಲುಪಡಿಸಿ ಕೊಂಡಾಗ, ತನ್ನ ಅನುರಾಗವು ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.

ಯೆಹೆಜ್ಕೇಲನು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी