ಯೆಶಾಯ 64:3

ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದಿ; ಬೆಟ್ಟಗಳು ನಿನ್ನ ಪ್ರಸನ್ನತೆಯಿಂದ ಕರಗಿಹೋದವು.

ಸಂದರ್ಭದೊಂದಿಗೆ ಓದಿ · ಯೆಶಾಯ 64

1ಆಹಾ, ನೀನು ಆಕಾಶಗಳನ್ನು ಹರಿದು ಬಿಟ್ಟು, ಇಳಿದು ಬಂದಿದ್ದರೆ ಎಷ್ಟೋ ಚೆನ್ನಾ ಗಿತ್ತು! ಬಾ! ಬೆಟ್ಟಗಳು ನಿನ್ನ ಸಮ್ಮುಖದಲ್ಲಿ ಕರಗಲಿ! ಜನಾಂಗಗಳು ನಿನ್ನ ಸಮ್ಮುಖದಲ್ಲಿ ನಡುಗುವ ಹಾಗೆ,

2ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ ಬೆಂಕಿ ನೀರನ್ನು ಉಕ್ಕಿಸುವಂತೆಯೂ ನಿನ್ನ ಹೆಸರು ನಿನ್ನ ವೈರಿಗಳಿಗೆ ತಿಳಿಯುವಂತೆಯೂ ಮಾಡು!

3ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದಿ; ಬೆಟ್ಟಗಳು ನಿನ್ನ ಪ್ರಸನ್ನತೆಯಿಂದ ಕರಗಿಹೋದವು.

4ದೇವರೇ, ನಿನಗೋಸ್ಕರ ಕಾದುಕೊಳ್ಳುವವನಿಗೆ ನೀನು ಮಾಡು ವದನ್ನು, ಲೋಕದ ಉತ್ಪತ್ತಿಗೆ ಮುಂಚೆ ನಿನ್ನ ಹೊರ ತಾಗಿ ಯಾರೂ ಕೇಳಲಿಲ್ಲ ಇಲ್ಲವೆ ಯಾರ ಕಿವಿ ಯಲ್ಲಿಯೂ ಬೀಳಲಿಲ್ಲ, ಯಾರ ಕಣ್ಣು ನೋಡಲಿಲ್ಲ.

5ಸಂತೋಷಪಟ್ಟು ನೀತಿಯನ್ನು ಕೈಕೊಳ್ಳುವವನನ್ನೂ ನಿನ್ನ ಮಾರ್ಗಗಳಲ್ಲಿ ನಿನ್ನನ್ನು ಜ್ಞಾಪಕಮಾಡುವವ ನನ್ನೂ ನೀನು ಎದುರುಗೊಳ್ಳುತ್ತೀ; ಇಗೋ, ನೀನು ರೌದ್ರನಾಗಿರುವಿ, ಯಾಕಂದರೆ ನಾವು ರಕ್ಷಿಸಲ್ಪಡದ ಹಾಗೆ ಪಾಪದಲ್ಲಿ ಮುಂದುವರಿದೆವು.

ಯೆಶಾಯ 64 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी