ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು.
17ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.
18ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ.
19ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು.
20ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.
21ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ