ಯೆಶಾಯ 58:10

ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು.

ಸಂದರ್ಭದೊಂದಿಗೆ ಓದಿ · ಯೆಶಾಯ 58

8ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು.

9ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,

10ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು.

11ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.

12ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.

ಯೆಶಾಯ 58 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी