೧ ಸಮುವೇಲನು 14:43

ಆಗ ಸೌಲನು ಯೋನಾತಾನನಿಗೆ--ನೀನು ಮಾಡಿ ದ್ದನ್ನು ನನಗೆ ತಿಳಿಸು ಅಂದನು. ಅದಕ್ಕೆ ಯೋನಾ ತಾನನು--ನನ್ನ ಕೈಯಲ್ಲಿರುವ ಕೋಲಿನ ಕೊನೆಯಿಂದ ನಾನು ಸ್ವಲ್ಪ ಜೇನು ತುಪ್ಪವನ್ನು ತಕ್ಕೊಂಡು ರುಚಿ ನೋಡಿದೆನು; ಇಗೋ, ನಾನು ಸಾಯಬೇಕು ಅಂದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 14

41ಸೌಲನು ಇಸ್ರಾಯೇಲಿನ ದೇವರಾದ ಕರ್ತನಿಗೆ--ನೀನು ಪೂರ್ಣ ನಿರ್ಣಯವನ್ನು ದಯಪಾಲಿಸು ಎಂದು ಹೇಳಿ ಚೀಟು ಹಾಕಿದೆನು ಅಂದನು. ಸೌಲನಿಗೂ ಯೋನಾತಾನನಿಗೂ ಚೀಟುಬಂತು.

42ಆದರೆ ಜನರು ಪಾರಾದರು. ಸೌಲನು ಅವರಿಗೆ--ನನ್ನ ಮೇಲೆಯೂ ನನ್ನ ಮಗನಾದ ಯೋನಾತಾನನ ಮೇಲೆಯೂ ಚೀಟು ಹಾಕಿರಿ ಅಂದಾಗ ಯೋನಾತಾನನಿಗೆ ಚೀಟು ಬಿತ್ತು.

43ಆಗ ಸೌಲನು ಯೋನಾತಾನನಿಗೆ--ನೀನು ಮಾಡಿ ದ್ದನ್ನು ನನಗೆ ತಿಳಿಸು ಅಂದನು. ಅದಕ್ಕೆ ಯೋನಾ ತಾನನು--ನನ್ನ ಕೈಯಲ್ಲಿರುವ ಕೋಲಿನ ಕೊನೆಯಿಂದ ನಾನು ಸ್ವಲ್ಪ ಜೇನು ತುಪ್ಪವನ್ನು ತಕ್ಕೊಂಡು ರುಚಿ ನೋಡಿದೆನು; ಇಗೋ, ನಾನು ಸಾಯಬೇಕು ಅಂದನು.

44ಅದಕ್ಕೆ ಸೌಲನು--ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ ಅಂದನು.

45ಆದರೆ ಜನರು ಸೌಲನಿಗೆ--ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆ ಯನ್ನುಂಟು ಮಾಡಿದ ಯೋನಾತಾನನು ಸಾಯ ಬಹುದೋ? ಅದು ಎಂದಿಗೂ ಆಗದು; ಅವನು ಇಂದು ಕರ್ತನ ಸಹಾಯದ ಮೂಲಕ ಕಾರ್ಯವನ್ನು ನಡಿಸಿದ್ದರಿಂದ ಕರ್ತನ ಆಣೆ, ಅವನ ತಲೆಯಲ್ಲಿರುವ ಒಂದು ಕೂದಲಾದರೂ ನೆಲದ ಮೇಲೆ ಬೀಳಬಾರದು ಅಂದರು. ಜನರು ಯೋನಾತಾನನನ್ನು ಸಾಯದ ಹಾಗೆ ಬಿಡಿಸಿಕೊಂಡರು.

೧ ಸಮುವೇಲನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी