ವಿಮೋಚನಕಾಂಡ 19:7

ಆಗ ಮೋಶೆಯು ಬಂದು ಜನರ ಹಿರಿಯರನ್ನು ಕರೆದು ಕರ್ತನು ತನಗೆ ಆಜ್ಞಾಪಿಸಿದ ಈ ಮಾತುಗ ಳನ್ನೆಲ್ಲಾ ಅವರ ಮುಂದೆ ಇಟ್ಟನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 19

5ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.

6ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್‌ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.

7ಆಗ ಮೋಶೆಯು ಬಂದು ಜನರ ಹಿರಿಯರನ್ನು ಕರೆದು ಕರ್ತನು ತನಗೆ ಆಜ್ಞಾಪಿಸಿದ ಈ ಮಾತುಗ ಳನ್ನೆಲ್ಲಾ ಅವರ ಮುಂದೆ ಇಟ್ಟನು.

8ಜನರೆಲ್ಲಾ ಏಕವಾಗಿ ಉತ್ತರ ಕೊಟ್ಟು--ಕರ್ತನು ಹೇಳಿದವುಗಳನ್ನೆಲ್ಲಾ ಮಾಡುತ್ತೇವೆ ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿರಿಗಿ ಹೇಳಿದನು.

9ಕರ್ತನು ಮೋಶೆಗೆ--ಇಗೋ, ನಾನು ನಿನ್ನ ಸಂಗಡ ಮಾತನಾಡುವದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ಮಂದ ವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ ಅಂದನು. ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿಳಿಸಿದನು.

ವಿಮೋಚನಕಾಂಡ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी