ಯೆಹೆಜ್ಕೇಲನು 27:34

ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 27

32ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು--ಸಮುದ್ರದ ನಡುವೆ ಹಾಳಾಗಿರುವ ತೂರಿನಂತ ಪಟ್ಟಣ ಯಾವದು?

33ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ; ಅವುಗಳಿಂದ ಬಹು ಜನಾಂಗ ಗಳನ್ನು ತುಂಬಿಸಿದೆ; ನಿನ್ನ ಅಪಾರವಾದ ಐಶ್ವರ್ಯ ದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜ ರನ್ನು ಸಮೃದ್ಧಿಪಡಿಸಿದೆ.

34ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು.

35ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ. ಅರಸರು ಬಹಳ ವಾಗಿ ಭಯಪಟ್ಟಿದ್ದಾರೆ. ರಾಜರುಗಳು ನಡುಗಿ ಭೀತಿ ಗೊಂಡರು.

36ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.

ಯೆಹೆಜ್ಕೇಲನು 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी