ಅವರಿಬ್ಬರೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿಕೊಂಡರು. ದಾವೀದನು ಅರಣ್ಯದಲ್ಲೇ ಉಳಿದನು; ಆದರೆ ಯೋನಾತಾನನು ತನ್ನ ಮನೆಗೆ ಹೋದನು.
16ಆಗ ಸೌಲನ ಮಗನಾದ ಯೋನಾತಾನನು ಎದ್ದು ಅರಣ್ಯದಲ್ಲಿರುವ ದಾವೀದನ ಬಳಿಗೆ ಹೋಗಿ ದೇವರಲ್ಲಿ ಅವನ ಕೈಯನ್ನು ಬಲಪಡಿಸಿ ಅವನಿಗೆ--ಭಯಪಡಬೇಡ;
17ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ; ನಾನು ನಿನ್ನ ತರುವಾಯ ಇರುವೆನು. ಹೀಗೆ ಆಗುವದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ ಅಂದನು.
18ಅವರಿಬ್ಬರೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿಕೊಂಡರು. ದಾವೀದನು ಅರಣ್ಯದಲ್ಲೇ ಉಳಿದನು; ಆದರೆ ಯೋನಾತಾನನು ತನ್ನ ಮನೆಗೆ ಹೋದನು.
19ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ?
20ಅರಸನೇ, ನೀನು ನಿನ್ನ ಪ್ರಾಣದ ಇಚ್ಛೆ ಇದ್ದ ಹಾಗೆ ಇಳಿದು ಬಾ; ಅವನನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವ ಭಾರವು ನಮ್ಮದು ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ