ಯೆಶಾಯ 49:14

ಆದರೆ ಚೀಯೋನು--ಕರ್ತನು ನನ್ನನ್ನು ತಳ್ಳಿ ಬಿಟ್ಟಿದ್ದಾನೆ ಮತ್ತು ನನ್ನ ಕರ್ತನು ನನ್ನನ್ನು ಮರೆತು ಬಿಟ್ಟಿದ್ದಾನಲ್ಲಾ ಎಂದು ಅಂದುಕೊಂಡಳು.

ಸಂದರ್ಭದೊಂದಿಗೆ ಓದಿ · ಯೆಶಾಯ 49

12ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್‌ ದೇಶದಿಂದ ಬರುತ್ತಿದ್ದಾರೆ.

13ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.

14ಆದರೆ ಚೀಯೋನು--ಕರ್ತನು ನನ್ನನ್ನು ತಳ್ಳಿ ಬಿಟ್ಟಿದ್ದಾನೆ ಮತ್ತು ನನ್ನ ಕರ್ತನು ನನ್ನನ್ನು ಮರೆತು ಬಿಟ್ಟಿದ್ದಾನಲ್ಲಾ ಎಂದು ಅಂದುಕೊಂಡಳು.

15ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ.

16ಇಗೋ, ನಾನು ನನ್ನ ಅಂಗೈಗಳಲ್ಲಿ ನಿನ್ನನ್ನು ಕೆತ್ತಿಕೊಂಡಿದ್ದೇನೆ; ನಿನ್ನ ಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.

ಯೆಶಾಯ 49 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी