ಅರಣ್ಯಕಾಂಡ 14:11

ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 14

9ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.

10ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್‌ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು.

11ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?

12ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲಮಾಡಿ ನಿನ್ನನ್ನು ಅವರಿಗಿಂತ ದೊಡ್ಡದಾದ ಬಲವುಳ್ಳ ಜನಾಂಗವನ್ನಾಗಿ ಮಾಡುವೆನು ಅಂದನು.

13ಆಗ ಮೋಶೆ ಕರ್ತನಿಗೆ--ಹಾಗಾದರೆ ಐಗುಪ್ತ್ಯರು ಅದನ್ನು ಕೇಳುವರು; ನೀನು ಈ ಜನರನ್ನು ನಿನ್ನ ಬಲದೊಂದಿಗೆ ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಿಯಲ್ಲಾ!

ಅರಣ್ಯಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी