ಹೋಶೇ 8:4

ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.

ಸಂದರ್ಭದೊಂದಿಗೆ ಓದಿ · ಹೋಶೇ 8

2ಇಸ್ರಾಯೇಲಿ ನವರು--ನನ್ನ ದೇವರೇ, ನಾವು ನಿನ್ನನ್ನು ತಿಳಿದಿದ್ದೇವೆ ಎಂದು ನನಗೆ ಕೂಗುವರು.

3ಇಸ್ರಾಯೇಲು ಒಳ್ಳೆಯ ಸಂಗತಿಯನ್ನು ತಳ್ಳಿಬಿಟ್ಟಿದೆ. ಶತ್ರುವು ಅವನನ್ನು ಹಿಂದಟ್ಟುವನು.

4ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.

5ಓ ಸಮಾ ರ್ಯವೇ, ನಿನ್ನ ಬಸವನನ್ನು ನಾನು ತಳ್ಳಿಹಾಕಿದ್ದೇನೆ; ನನ್ನ ಕೋಪವು ಅವರ ಮೇಲೆ ಉರಿಯುತ್ತದೆ; ಅವರು ನಿರಪರಾಧಿಗಳಾಗದೆ ಇರುವದು ಎಷ್ಟರ ವರೆಗೆ?

6ಅದು ಇಸ್ರಾಯೇಲ್ಯರಿಂದಲೂ ಆಗಿದೆ; ಕೆಲಸಗಾರನು ಅದನ್ನು ಮಾಡಿದನು, ಆದ್ದರಿಂದ ಅದು ದೇವರಲ್ಲ; ಆದರೆ ಸಮಾರ್ಯದ ಕರುವು ಪುಡಿಪುಡಿಯಾಗಿ ಮುರಿಯಲ್ಪಡುವದು.

ಹೋಶೇ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी