ನ್ಯಾಯಸ್ಥಾಪಕರು 5:28

ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿ ಯಿಂದ ಕೂಗಿದಳು--ಅವನ ರಥವು ಬರುವದಕ್ಕೆ ಇಷ್ಟು ಆಲಸ್ಯವಾದದ್ದೇನು? ಅವನ ರಥಗಳ ಗಾಲಿ ಗಳು ಹಿಂದುಳಿದು ಇರುವದೇನು?

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 5

26ತನ್ನ ಕೈಯಲ್ಲಿ ಮೊಳೆಯನ್ನು ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆ ಯನ್ನು ತೆಗೆದುಕೊಂಡಳು; ಅವಳು ಸೀಸೆರನನ್ನು ಸುತ್ತಿಗೆ ಯಿಂದ ಹೊಡೆದಳು; ಅವಳು ಅವನ ಕಣತಲೆಯನ್ನು ತಿವಿದು ಹೊಡೆದಳು. ಅವನ ತಲೆಯನ್ನು ಹೊಡೆದು ಬಿಟ್ಟಳು.

27ಅವಳ ಕಾಲುಗಳ ಹತ್ತಿರ ಅವನು ಬೊಗ್ಗಿ ಬಿದ್ದು ಮಲಗಿದನು; ಅವಳ ಕಾಲುಗಳ ಹತ್ತಿರ ಬಾಗಿ ಬಿದ್ದನು; ಎಲ್ಲಿ ಬಾಗಿಬಿದ್ದನೋ ಅಲ್ಲಿಯೇ ಬಿದ್ದು ಸತ್ತನು.

28ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿ ಯಿಂದ ಕೂಗಿದಳು--ಅವನ ರಥವು ಬರುವದಕ್ಕೆ ಇಷ್ಟು ಆಲಸ್ಯವಾದದ್ದೇನು? ಅವನ ರಥಗಳ ಗಾಲಿ ಗಳು ಹಿಂದುಳಿದು ಇರುವದೇನು?

29ಅದಕ್ಕೆ ಅವಳ ಜ್ಞಾನವುಳ್ಳ ಪ್ರಧಾನ ಸ್ತ್ರೀಯರು ಪ್ರತ್ಯುತ್ತರಕೊಟ್ಟರು. ಹೌದು, ಅವಳೇ ತನಗೆ ಬದಲು ಮಾತು ಕೇಳಿ ಕೊಂಡಳು.

30ಅವರು ಓಡಲಿಲ್ಲವೋ? ಕೊಳ್ಳೆಹಂಚಿ ಕೊಳ್ಳಲಿಲ್ಲವೋ? ಒಬ್ಬೊಬ್ಬ ಮನುಷ್ಯನಿಗೆ ಒಂದೆರಡು ಹೆಣ್ಣು, ಸೀಸೆರನಿಗೆ ನಾನಾ ವರ್ಣವುಳ್ಳ ಕೊಳ್ಳೆ, ನಾನಾ ವರ್ಣವುಳ್ಳಂಥ ವಿಚಿತ್ರವಾಗಿ, ಹೊಲಿದಂಥ, ಎರಡು ಪಕ್ಕೆಗಳಲ್ಲಿ ವಿಚಿತ್ರವಾಗಿ ಹೊಲಿದಂಥ, ಕೊಳ್ಳೆ ಹಿಡಿ ಯುವರ ಕಂಠಗಳಿಗೆ ತಕ್ಕಂಥ ನಾನಾ ವರ್ಣವುಳ್ಳ ಕೊಳ್ಳೆ, ಸಿಕ್ಕಲಿಲ್ಲವೋ?

ನ್ಯಾಯಸ್ಥಾಪಕರು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी