ನೆಹೆಮಿಯ 3:2

ಇವರ ತರುವಾಯ ಯೆರಿಕೋವಿನ ಮನುಷ್ಯರು ಕಟ್ಟಿದರು. ಇವರ ತರುವಾಯ ಇಮ್ರಿಯ ಮಗನಾದ ಜಕ್ಕೂರನು ಕಟ್ಟಿದನು.

ಸಂದರ್ಭದೊಂದಿಗೆ ಓದಿ · ನೆಹೆಮಿಯ 3

1ಆಗ ಪ್ರಧಾನ ಯಾಜಕನಾದ ಎಲ್ಯಾಷೀಬನೂ ಅವನ ಸಹೋದರರಾದ ಯಾಜಕರೂ ಎದ್ದು ಕುರಿ ಬಾಗಲನ್ನು ಕಟ್ಟಿದರು. ಇವರು ಅದನ್ನು ಪರಿಶುದ್ಧ ಮಾಡಿ ಅದರ ಬಾಗಲುಗಳನ್ನು ನಿಲ್ಲಿಸಿದರು. ಹಮ್ಮೆಯದ ಗೋಪುರದ ಮಟ್ಟಿಗೂ ಹನನೇಲನ ಗೋಪುರದ ವರೆಗೂ ಅದನ್ನು ಪರಿಶುದ್ಧ ಮಾಡಿದರು.

2ಇವರ ತರುವಾಯ ಯೆರಿಕೋವಿನ ಮನುಷ್ಯರು ಕಟ್ಟಿದರು. ಇವರ ತರುವಾಯ ಇಮ್ರಿಯ ಮಗನಾದ ಜಕ್ಕೂರನು ಕಟ್ಟಿದನು.

3ಆದರೆ ವಿಾನಿನ ಬಾಗಲನ್ನು ಹಸ್ಸೆನಾಹನ ಮಕ್ಕಳು ಕಟ್ಟಿದರು; ಇವರು ಅದರ ತೊಲೆಗಳನ್ನು ಹೊಂದಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದರು.

4ಇವರ ತರುವಾಯ ಹಕ್ಕೋಚನ ಮಗನಾದ ಊರೀಯನ ಮಗನಾದ ಮೆರೇಮೋತನು ಹಳೇದನ್ನು ಭದ್ರಪಡಿಸಿದನು. ಇವರ ತರುವಾಯ ಮೆಷೇಜಬೇಲನ ಮಗನಾದ ಬೆರೆಕ್ಯನ ಮಗನಾದ ಮೆಷುಲ್ಲಾಮನು ಹಳೇದನ್ನು ಭದ್ರಪಡಿಸಿದನು; ಇವರ ತರುವಾಯ ಬಾಣನ ಮಗನಾದ ಚಾದೋಕನು ಭದ್ರ ಪಡಿಸಿದನು.

ನೆಹೆಮಿಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी