ಹೀಗೆ ದಾವೀದನ ಯುವಕರು ತಮ್ಮ ಮಾರ್ಗವಾಗಿ ಹಿಂದಕ್ಕೆ ತಿರುಗಿ ದಾವೀದನ ಬಳಿಗೆ ಬಂದು ಈ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದರು.
10ನಾಬಾಲನು ದಾವೀದನ ಸೇವಕರಿಗೆ ಪ್ರತ್ಯುತ್ತರವಾಗಿ--ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಇದ್ದಾರೆ.
11ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆಯನ್ನು ಕತ್ತರಿಸುವವ ರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ತೆಗೆದು ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ ಅಂದನು.
12ಹೀಗೆ ದಾವೀದನ ಯುವಕರು ತಮ್ಮ ಮಾರ್ಗವಾಗಿ ಹಿಂದಕ್ಕೆ ತಿರುಗಿ ದಾವೀದನ ಬಳಿಗೆ ಬಂದು ಈ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದರು.
13ದಾವೀದನು ತನ್ನ ಮನುಷ್ಯ ರಿಗೆ--ನೀವು ಒಬ್ಬೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ ಅಂದನು. ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು; ಹಾಗೆಯೇ ದಾವೀದನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು; ಆದರೆ ಇನ್ನೂರು ಮಂದಿ ಸಾಮಗ್ರಿಗಳ ಬಳಿಯಲ್ಲಿ ನಿಂತರು.
14ಆಗ ಕೆಲಸದವರಲ್ಲಿ ಯೌವನಸ್ಥನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ--ಇಗೋ, ನಮ್ಮ ಯಜಮಾನನನ್ನು ವಂದಿಸಲು ದಾವೀದನು ಅರಣ್ಯದಿಂದ ದೂತರನ್ನು ಕಳುಹಿಸಿದನು; ಆದರೆ ಅವನು ಅವರನ್ನು ನಿಂದಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ