ಮತ್ತಾಯನು 18:17

ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.

ಸಂದರ್ಭದೊಂದಿಗೆ ಓದಿ · ಮತ್ತಾಯನು 18

15ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.

16ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು.

17ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.

18ನಾನು ನಿಮಗೆ ನಿಜವಾಗಿ ಹೇಳುವದೇನಂ ದರೆ--ನೀವು ಭೂಮಿಯ ಮೇಲೆ ಯಾವದನ್ನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡು ವದು. ಮತ್ತು ನೀವು ಭೂಮಿಯ ಮೇಲೆ ಯಾವದನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪ ಡುವದು.

19ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು.

ಮತ್ತಾಯನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी