೧ ಅರಸುಗಳು 1:5

ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 1

3ಹಾಗೆಯೇ ಅವರು ಸೌಂದರ್ಯವತಿಯಾದ ಹುಡುಗಿಗೋಸ್ಕರ ಇಸ್ರಾ ಯೇಲಿನ ಮೇರೆಗಳಲ್ಲೆಲ್ಲಾ ಹುಡುಕಿ ಶೂನೇಮ್‌ಳಾದ ಅಬೀಷಗ್‌ಳನ್ನು ಕಂಡುಕೊಂಡು ಅವಳನ್ನು ಅರಸನ ಬಳಿಗೆ ಕರತಂದರು.

4ಈ ಸೌಂದರ್ಯವತಿಯಾದ ಹುಡುಗಿಯು ಅರಸನನ್ನು ಆದರಿಸಿ ಅವನನ್ನು ಸೇವಿ ಸುತ್ತಾ ಇದ್ದಳು; ಆದರೆ ಅರಸನು ಅವಳನ್ನು ಅರಿಯದೆ ಇದ್ದನು.

5ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.

6ಅವನ ತಂದೆಯು ಎಂದಾದರೂ--ನೀನು ಯಾಕೆ ಹೀಗೆ ಮಾಡಿದಿ ಎಂದು ಹೇಳಿ ಅವನನ್ನು ಗದರಿಸಲಿಲ್ಲ. ಇದಲ್ಲದೆ ಅವನು ಬಹು ರೂಪವಂತನಾಗಿದ್ದನು.

7ಅಬ್ಷಾಲೋಮನ ತರು ವಾಯ ಅವನ ತಾಯಿ ಅವನನ್ನು ಹೆತ್ತಳು. ಅವನು ಚೆರೂಯಳ ಮಗನಾದ ಯೋವಾಬನ ಸಂಗಡಲೂ ಯಾಜಕನಾದ ಎಬ್ಯಾತಾರನ ಸಂಗಡಲೂ ಮಾತನಾ ಡಿದನು; ಅವರು ಅದೋನೀಯನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾಗಿದ್ದರು.

೧ ಅರಸುಗಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी