ಯೆರೆಮಿಯ 7:4

ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 7

2ಕರ್ತನ ಆಲಯದ ಬಾಗಿಲಿನಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು, ಏನಂದರೆ ಯೆಹೂದದವರೆಲ್ಲರೇ, ಕರ್ತನನ್ನು ಆರಾಧಿಸುವದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಕರ್ತನ ವಾಕ್ಯವನ್ನು ಕೇಳಿರಿ.

3ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆ ಮಾಡಿರಿ; ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು.

4ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.

5ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ

6ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ

ಯೆರೆಮಿಯ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी