ರೋಮಾಪುರದವರಿಗೆ 5:18

ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 5

16ಇದಲ್ಲದೆ ಪಾಪಮಾಡಿದ ಆ ಒಬ್ಬನಿಂದಲೇ ಬಂದಂತೆ ಈ ದಾನವು ಬರಲಿಲ್ಲ; ಯಾಕಂದರೆ ಒಬ್ಬ ಮನುಷ್ಯನ ಅಪರಾಧದ ದೆಸೆಯಿಂದಲೇ ತೀರ್ಪು ಉಂಟಾಯಿತು. ಆದರೆ ಉಚಿತವಾದ ದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ನಿರ್ಣಯಿಸುವಂಥದ್ದಾಗಿದೆ.

17ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).

18ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು.

19ಒಬ್ಬ ಮನುಷ್ಯನ ಅವಿಧೇಯತ್ವದಿಂದ ಅನೇಕರು ಹೇಗೆ ಪಾಪಿಗಳಾ ದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಅನೇಕರು ನೀತಿವಂತರಾಗುವರು.

20ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.

ರೋಮಾಪುರದವರಿಗೆ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी