೨ ಪೂರ್ವಕಾಲವೃತ್ತಾಂತ 34:24

ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ ಯೆಹೂದದ ಅರಸನ ಮುಂದೆ ಅವರು ಓದಿದ ಪುಸ್ತಕದಲ್ಲಿ ಬರೆ ಯಲ್ಪಟ್ಟ ಎಲ್ಲಾ ಶಾಪಗಳನ್ನೂ ಬರಮಾಡುವೆನು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 34

22ಆಗ ಹಿಲ್ಕೀ ಯನೂ ಅರಸನಿಂದ ನೇಮಿಸಲ್ಪಟ್ಟವರೂ ಹಸ್ರನ ಮಗನೂ ತೊಕ್ಹತನ ಮಗನೂ ವಸ್ತ್ರಗಳ ಕಾವಲುಗಾ ರನೂ ಆದ ಶಲ್ಲೂಮನ ಹೆಂಡತಿಯಾಗಿರುವ ಪ್ರವಾದಿ ನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಅದನ್ನು ಕುರಿತು ಮಾತನಾಡಿದರು. (ಅವಳು ಯೆರೂ ಸಲೇಮಿನೊಳಗೆ ಮಹಾವಿದ್ಯಾಲಯದಲ್ಲಿ ವಾಸವಾಗಿ ದ್ದಳು.)

23ಆಗ ಅವಳು--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದೇನಂದರೆ

24ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ ಯೆಹೂದದ ಅರಸನ ಮುಂದೆ ಅವರು ಓದಿದ ಪುಸ್ತಕದಲ್ಲಿ ಬರೆ ಯಲ್ಪಟ್ಟ ಎಲ್ಲಾ ಶಾಪಗಳನ್ನೂ ಬರಮಾಡುವೆನು.

25ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ.

26ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ--ನೀನು ಕೇಳಿದ ಮಾತುಗ ಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--

೨ ಪೂರ್ವಕಾಲವೃತ್ತಾಂತ 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी