ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು.
16ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.
17ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು.
18ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು.
19ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ