ಅರಣ್ಯಕಾಂಡ 17:7

ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರ ದೊಳಗೆ ಕರ್ತನ ಸಮ್ಮುಖದಲ್ಲಿ ಇಟ್ಟನು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 17

5ಆಗ ಏನಾಗುವ ದಂದರೆ, ನಾನು ಯಾವನನ್ನು ಆದುಕೊಳ್ಳುತ್ತೇನೋ ಆ ಮನುಷ್ಯನ ಕೋಲು ಚಿಗುರುವದು. ಹೀಗೆ ಇಸ್ರಾ ಯೇಲ್‌ ಮಕ್ಕಳು ನಿಮಗೆ ವಿರೋಧವಾಗಿ ಗುಣುಗುಟ್ಟು ವದನ್ನು ನಾನು ನಿಲ್ಲಿಸಿಬಿಡುವೆನು ಅಂದನು.

6ಹಾಗೆಯೇ ಮೋಶೆಯು ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಿದನು. ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಮನೆಗಳ ಪ್ರಕಾರ ಒಬ್ಬೊಬ್ಬ ಪ್ರಧಾನಿ ಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು. ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು.

7ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರ ದೊಳಗೆ ಕರ್ತನ ಸಮ್ಮುಖದಲ್ಲಿ ಇಟ್ಟನು.

8ಮರು ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಸಾಕ್ಷೀ ಗುಡಾರದೊಳೆಗೆ ಪ್ರವೇಶಿಸುವಾಗ ಇಗೋ, ಲೇವಿ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.

9ಆಗ ಮೋಶೆಯು ಎಲ್ಲಾ ಕೋಲುಗಳನ್ನು ಕರ್ತನ ಸನ್ನಿಧಿಯಿಂದ ಇಸ್ರಾಯೇಲ್‌ ಮಕ್ಕಳೆಲ್ಲರಿಗೆ ತೋರಿಸುವದಕ್ಕಾಗಿ ಹೊರಗೆ ತಂದನು. ಆಗ ಅವರು ನೋಡಿ ತಮ್ಮ ತಮ್ಮ ಕೋಲನ್ನು ತೆಗೆದುಕೊಂಡರು.

ಅರಣ್ಯಕಾಂಡ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी