ಆತನಿಗೆ ಮಹಿಮೆಯೂ ಅಧಿಪತ್ಯವೂ ಯುಗಯುಗಾಂತರ ಗಳಲ್ಲಿ ಇರಲಿ. ಆಮೆನ್.
9ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ.
10ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
11ಆತನಿಗೆ ಮಹಿಮೆಯೂ ಅಧಿಪತ್ಯವೂ ಯುಗಯುಗಾಂತರ ಗಳಲ್ಲಿ ಇರಲಿ. ಆಮೆನ್.
12ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಿಮಗೆ ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.
13ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆಹೇಳುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ