ಮಿಕ 1:13

ಲಾಕೀಷಿನ ನಿವಾಸಿಯೇ, ವೇಗವುಳ್ಳ ಕುದುರೆಗೆ ರಥವನ್ನು ಕಟ್ಟು, ಇದೇ ಚೀಯೋನಿನ ಮಗಳ ಪಾಪದ ಆರಂಭವು; ಇಸ್ರಾಯೇಲಿನ ಅಪರಾಧಗಳು ನಿನ್ನಲ್ಲಿ ಕಂಡುಬಂದವು.

ಸಂದರ್ಭದೊಂದಿಗೆ ಓದಿ · ಮಿಕ 1

11ಶಾಫೀರಿನ ನಿವಾಸಿಯೇ, ನಾಚಿಕೆ ಮುಚ್ಚದೆ ಹಾದುಹೋಗು; ಬೇತೇಚೆಲಿನ ಗೋಳಾಟದಲ್ಲಿ ಚಾನಾನಿನ ನಿವಾಸಿ ಮುಂದೆ ಬರಲಿಲ್ಲ; ಅವನು ನಿಮ್ಮಿಂದ ತನ್ನ ಸ್ಥಾನವನ್ನು ತಕ್ಕೊಳ್ಳುವನು.

12ಮಾರೋತಿನ ನಿವಾಸಿ ಒಳ್ಳೇದಕ್ಕೆ ಜಾಗ್ರತೆಯಾಗಿ ಕಾದುಕೊಳ್ಳುತ್ತಾನೆ; ಆದರೆ ಕೇಡು ಕರ್ತನಿಂದ ಯೆರೂಸಲೇಮಿನ ಬಾಗಲಿಗೆ ಇಳಿದಿದೆ.

13ಲಾಕೀಷಿನ ನಿವಾಸಿಯೇ, ವೇಗವುಳ್ಳ ಕುದುರೆಗೆ ರಥವನ್ನು ಕಟ್ಟು, ಇದೇ ಚೀಯೋನಿನ ಮಗಳ ಪಾಪದ ಆರಂಭವು; ಇಸ್ರಾಯೇಲಿನ ಅಪರಾಧಗಳು ನಿನ್ನಲ್ಲಿ ಕಂಡುಬಂದವು.

14ಹೀಗಿರುವದರಿಂದ ಮೋರೆಷತ್‌ ಗತ್‌ ಊರಿಗೆ ದಾನಗಳನ್ನು ಕೊಡುವಿ, ಅಕ್ಜೀಬಿನ ಮನೆತನಗಳು ಇಸ್ರಾಯೇಲಿನ ಅರಸರಿಗೆ ಸುಳ್ಳಾಗಿರುವವು.

15ಮಾರೇ ಷದ ನಿವಾಸಿಯೇ, ಇನ್ನೂ ಬಾಧ್ಯನನ್ನು ನಿನ್ನ ಬಳಿಗೆ ತರುವೆನು; ಅವನು ಇಸ್ರಾಯೇಲಿನ ಮಹಿಮೆಯಾದ ಅದುಲ್ಲಾಮಿನ ಮಟ್ಟಿಗೂ ಬರುವನು.

ಮಿಕ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी