ಅರಣ್ಯಕಾಂಡ 15:23

ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿವಸ ಮೊದಲುಗೊಂಡು ನಿಮ್ಮ ಸಂತತಿಗಳವರೆಗೂ ಕರ್ತನು ಮೋಶೆಯ ಕೈಯಿಂದ ನಿಮಗೆ ಆಜ್ಞಾಪಿಸಿದ ಪ್ರಕಾರ ನೀವು ಮಾಡದೆ ಹೋದರೆ

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 15

21ನಿಮ್ಮ ಸಂತತಿಗಳ ವರೆಗೂ ನಿಮ್ಮ ಹಿಟ್ಟಿನ ಪ್ರಥಮವಾದದ್ದನ್ನು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.

22ನೀವು ತಪ್ಪಿ ಕರ್ತನು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ

23ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿವಸ ಮೊದಲುಗೊಂಡು ನಿಮ್ಮ ಸಂತತಿಗಳವರೆಗೂ ಕರ್ತನು ಮೋಶೆಯ ಕೈಯಿಂದ ನಿಮಗೆ ಆಜ್ಞಾಪಿಸಿದ ಪ್ರಕಾರ ನೀವು ಮಾಡದೆ ಹೋದರೆ

24ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ ಸಭೆಯು ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ಒಂದು ಎಳೇ ಹೋರಿಯನ್ನೂ ಕ್ರಮದ ಪ್ರಕಾರ ಅದರ ಆಹಾರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಪಾಪ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.

25ಯಾಜಕನು ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು.

ಅರಣ್ಯಕಾಂಡ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी