ಅರಣ್ಯಕಾಂಡ 35:21

ಇಲ್ಲವೆ ಶತ್ರುತ್ವಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ; ಹೊಡೆದವನನ್ನು ನಿಜವಾಗಿ ಸಾಯಿಸಬೇಕು; ರಕ್ತ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆ ಪಾತಕನನ್ನು ಕೊಲ್ಲಬೇಕು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 35

19ರಕ್ತ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ತಾನೇ ಕೊಲ್ಲಬೇಕು; ಅವನನ್ನು ಸಂಧಿಸುವಾಗಲೇ ಕೊಲ್ಲ ಬೇಕು.

20ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ ಇಲ್ಲವೆ ನೂಕುವದ ರಿಂದಲಾದರೂ ಹೊಂಚಿ ನೋಡಿಕೊಂಡು ಅವನ ಮೇಲೆ ಯಾವದನ್ನಾದರೂ ಬಲವಾಗಿ ಎಸೆದರೆ

21ಇಲ್ಲವೆ ಶತ್ರುತ್ವಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ; ಹೊಡೆದವನನ್ನು ನಿಜವಾಗಿ ಸಾಯಿಸಬೇಕು; ರಕ್ತ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆ ಪಾತಕನನ್ನು ಕೊಲ್ಲಬೇಕು.

22ಆದರೆ ಶತ್ರುತ್ವವಿಲ್ಲದೆ ತಕ್ಷಣವೇ ಅವನನ್ನು ನೂಕುವದರಿಂದಲಾದರೂ ಸಮಯ ನೋಡಿಕೊಳ್ಳದೆ ಯಾವದಾದರೊಂದು ಆಯುಧವನ್ನು ಅವನ ಮೇಲೆ ಎಸೆದರೆ

23ಇಲ್ಲವೆ ಶತ್ರುತ್ವವಿಲ್ಲದೆಯೂ ಅವನ ಕೇಡನ್ನು ಹುಡುಕದೆಯೂ ಅವನನ್ನು ನೋಡದೆಯೂ ಮರಣ ವಾಗುವಂತೆ ಯಾವದಾದರೊಂದು ಕಲ್ಲನ್ನು ಅವನು ಸಾಯುವ ಹಾಗೆ ಅವನ ಮೇಲೆ ಬೀಳಮಾಡಿದರೆ

ಅರಣ್ಯಕಾಂಡ 35 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी