ಯೆಶಾಯ 16:3

ಆಲೋಚಿಸಿ ತೀರ್ಮಾನಿಸು; ಮಟ್ಟ ಮಧ್ಯಾಹ್ನದಲ್ಲಿ ನಿನ್ನ ನೆರಳನ್ನು ರಾತ್ರಿಯಂತೆ ಮಾಡು; ತಳ್ಳಿಬಿಟ್ಟವ ರನ್ನು ಅಡಗಿಸು; ಅಲೆಯುವವನನ್ನು ಬೈಲಿಗೆ ತರಬೇಡ.

ಸಂದರ್ಭದೊಂದಿಗೆ ಓದಿ · ಯೆಶಾಯ 16

1ದೇಶವನ್ನು ಆಳುವವನಿಗೆ ಕುರಿಮರಿಯನ್ನು ಸೆಲದಿಂದ ಅರಣ್ಯದ ಕಡೆಗೆ ಚೀಯೋನಿನ ಕುಮಾರ್ತೆಯರ ಬೆಟ್ಟಕ್ಕೆ ಕಳುಹಿಸಿರಿ.

2ಗೂಡಿನಿಂದ ಹೊರಗೆ ಬಂದ ಹಕ್ಕಿಗಳು ಅಲೆದಾಡುವ ಹಾಗೆ ಮೋವಾಬಿನ ಕುಮಾರ್ತೆಯರು ಅರ್ನೋನ್‌ ನದಿಯ ಹಾಯ್ಗಡಗಳಲ್ಲಿ ಇರುವರು.

3ಆಲೋಚಿಸಿ ತೀರ್ಮಾನಿಸು; ಮಟ್ಟ ಮಧ್ಯಾಹ್ನದಲ್ಲಿ ನಿನ್ನ ನೆರಳನ್ನು ರಾತ್ರಿಯಂತೆ ಮಾಡು; ತಳ್ಳಿಬಿಟ್ಟವ ರನ್ನು ಅಡಗಿಸು; ಅಲೆಯುವವನನ್ನು ಬೈಲಿಗೆ ತರಬೇಡ.

4ಮೋವಾಬೇ, ನನ್ನಿಂದ ತಳ್ಳಿಬಿಟ್ಟವರು ನಿನ್ನೊಂದಿಗೆ ವಾಸಿಸಲಿ; ಹಾಳುಮಾಡುವವರ ಮುಖಗಳಿಂದ ಅವ ರಿಗೆ ಮರೆಯಾಗಿರು: ಹಿಂಸಿಸುವದು ಮುಗಿಯುತ್ತಾ ಬಂತು, ಸೂರೆಮಾಡುವದು ನಿಲ್ಲುವದು. ಪೀಡಿಸು ವವರು ದೇಶದಿಂದ ದಹಿಸಲ್ಪಡುವರು.

5ಕರುಣೆಯಲ್ಲಿ ಸಿಂಹಾಸನವು ಸ್ಥಾಪಿಸಲ್ಪಡುವದು; ನ್ಯಾಯತೀರಿಸು ವವನೂ ನ್ಯಾಯವನ್ನು ಹುಡುಕುವವನೂ ನೀತಿಗೋ ಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿ ಅದರ ಮೇಲೆ ಸತ್ಯದಲ್ಲಿ ಕೂತುಕೊಳ್ಳುವನು.

ಯೆಶಾಯ 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी