ಅರಣ್ಯಕಾಂಡ 22:28

ಆಗ ಕರ್ತನು ಕತ್ತೆಯ ಬಾಯನ್ನು ತೆರೆದನು; ಅದು ಬಿಳಾಮನಿಗೆ--ಈಗ ನನ್ನನ್ನು ಮೂರುಸಾರಿ ಹೊಡೆಯುವ ಹಾಗೆ ನಾನು ನಿನಗೆ ಏನು ಮಾಡಿದೆನು ಎಂದು ಹೇಳಿತು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 22

26ಆಗ ಕರ್ತನ ದೂತನು ಮುಂದೆ ಹೋಗಿ ಬಲಕ್ಕೂ ಎಡಕ್ಕೂ ತಿರುಗುವದಕ್ಕೆ ಮಾರ್ಗವಿಲ್ಲದ ಇಕ್ಕಟ್ಟಿನ ಸ್ಥಳದಲ್ಲಿ ನಿಂತನು.

27ಕತ್ತೆಯು ಕರ್ತನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು; ಆದಕಾರಣ ಬಿಳಾಮನು ಕೋಪಿಸಿಕೊಂಡು ಕತ್ತೆಯನ್ನು ಬೆತ್ತದಿಂದ ಹೊಡೆದನು.

28ಆಗ ಕರ್ತನು ಕತ್ತೆಯ ಬಾಯನ್ನು ತೆರೆದನು; ಅದು ಬಿಳಾಮನಿಗೆ--ಈಗ ನನ್ನನ್ನು ಮೂರುಸಾರಿ ಹೊಡೆಯುವ ಹಾಗೆ ನಾನು ನಿನಗೆ ಏನು ಮಾಡಿದೆನು ಎಂದು ಹೇಳಿತು.

29ಬಿಳಾಮನು ಕತ್ತೆಗೆ--ನೀನು ನನಗೆ ಹಾಸ್ಯಮಾಡಿದಿಯಲ್ಲಾ? ನನ್ನ ಕೈಯಲ್ಲಿ ಕತ್ತಿ ಇದ್ದರೆ ನಾನು ಈಗಲೇ ನಿನ್ನನ್ನು ಕೊಂದುಹಾಕುತ್ತಿದ್ದೆ ಅಂದನು.

30ಕತ್ತೆಯು ಬಿಳಾಮನಿಗೆ ಹೇಳಿದ್ದು--ನಾನು ನಿನ್ನದಾ ದಂದಿನಿಂದ ಈ ದಿವಸದ ವರೆಗೂ ನೀನು ಹತ್ತಿಕೊಂಡ ನಿನ್ನ ಕತ್ತೆಯು ನಾನಲ್ಲವೋ? ನಾನು ಎಂದಾದರೂ ನಿನಗೆ ಈ ಪ್ರಕಾರ ಮಾಡಿದೆನೋ ಅಂದಿತು. ಅದಕ್ಕ ವನು--ಇಲ್ಲ ಅಂದನು.

ಅರಣ್ಯಕಾಂಡ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी