ಎಫ್ರಾಯಾಮ್ಯರ ಘನತೆಯು ಹಾರಿಹೋಗುವ ಪಕ್ಷಿಯ ಹಾಗೆ ಇದೆ. ಜನ್ಮವಾಗಲಿ, ಗರ್ಭಧರಿಸುವದಾಗಲಿ ಉತ್ಪತ್ತಿಯಾಗಲಿ ಅವರಿಗೆ ಇರು ವದಿಲ್ಲ.
9ಗಿಬ್ಯದ ದಿನಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ; ಆದದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕಮಾಡಿಕೊಳ್ಳುವನು, ಅವರ ಪಾಪಗಳನ್ನು ವಿಚಾರಿಸುವನು.
10ನಾನು ಅರಣ್ಯದಲ್ಲಿ ದ್ರಾಕ್ಷೆಯ ಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡ ದಲ್ಲಿ ಮೊದಲನೆಯ ಹಣ್ಣುಗಳ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು; ಆದರೆ ಅವರು ಬಾಳ್ ಪೆಗೋರಿಗೆ ಹತ್ತಿರ ಬಂದು ನಾಚಿಕೆಯಾದದ್ದಕ್ಕೆ ತಮ್ಮನ್ನು ಪ್ರತ್ಯೇ ಕಿಸಿಕೊಂಡರು; ಅವರು ಪ್ರೀತಿಮಾಡಿದ್ದರ ಹಾಗೆ ಅಸಹ್ಯರಾದರು.
11ಎಫ್ರಾಯಾಮ್ಯರ ಘನತೆಯು ಹಾರಿಹೋಗುವ ಪಕ್ಷಿಯ ಹಾಗೆ ಇದೆ. ಜನ್ಮವಾಗಲಿ, ಗರ್ಭಧರಿಸುವದಾಗಲಿ ಉತ್ಪತ್ತಿಯಾಗಲಿ ಅವರಿಗೆ ಇರು ವದಿಲ್ಲ.
12ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ!
13ನಾನು ತೂರನ್ನು ನೊಡಿದಂತೆ ಎಫ್ರಾಯಾಮು ರಮ್ಯ ಸ್ಥಳದಲ್ಲಿ ನೆಡಲ್ಪಟ್ಟಿದೆ; ಆದರೆ ಎಫ್ರಾಯಾಮು ಕೊಲ್ಲುವವನಿಗೆ ತನ್ನ ಮಕ್ಕಳನ್ನು ಹೊರಗೆ ತರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ