ಆದಿಕಾಂಡ 20:9

ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 20

7ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.

8ಅಬೀಮೆಲೆಕನು ಬೆಳಿಗ್ಗೆ ಎದ್ದು ತನ್ನ ಸೇವಕರೆಲ್ಲರನ್ನು ಕರೆದು ಇವುಗಳನ್ನೆಲ್ಲ ಅವರಿಗೆ ಹೇಳಿದನು; ಅದಕ್ಕೆ ಆ ಮನುಷ್ಯರು ಬಹಳವಾಗಿ ಹೆದರಿದರು.

9ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು.

10ಅಬೀಮೆಲೆಕನು ಅಬ್ರಹಾ ಮನಿಗೆ--ನೀನು ಇದನ್ನು ಮಾಡುವದಕ್ಕೆ ಏನು ನೋಡಿದೆ ಅಂದಾಗ

11ಅಬ್ರಹಾಮನು--ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ಅಂದುಕೊಂಡೆನು.

ಆದಿಕಾಂಡ 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी