ಯೆಶಾಯ 10:16

ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.

ಸಂದರ್ಭದೊಂದಿಗೆ ಓದಿ · ಯೆಶಾಯ 10

14ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು.

15ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.

16ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.

17ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು;

18ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು.

ಯೆಶಾಯ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी