೨ ಪೂರ್ವಕಾಲವೃತ್ತಾಂತ 23:16

ಆಗ ಅವರು ಕರ್ತನ ಜನರಾಗಿರುವ ಹಾಗೆ ಯೆಹೋಯಾದನು ತನಗೂ ಸಮಸ್ತ ಜನರಿಗೂ ಅರಸ ನಿಗೂ ಒಡಂಬಡಿಕೆ ಮಾಡಿದನು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 23

14ಆಗ ಯಾಜಕನಾದ ಯೆಹೋ ಯಾದನು ಸೈನ್ಯದ ಮೇಲೆ ಇರುವ ಶತಾಧಿಪತಿಗ ಳನ್ನು ಹೊರಗೆ ಕರತಂದು ಅವರಿಗೆ--ಅವಳನ್ನು ಸಾಲುಗಳ ಹೊರಗೆ ಹೊರಡಿಸಿರಿ, ಅವಳನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಂದುಹಾಕಿರಿ ಅಂದನು. ಯಾಕಂದರೆ ಕರ್ತನ ಆಲಯದಲ್ಲಿ ಅವ ಳನ್ನು ಕೊಲ್ಲಬೇಡಿರಿ ಎಂದು ಯಾಜಕನು ಹೇಳಿದನು.

15ಹಾಗೆಯೇ ಅವರು ಅವಳ ಮೇಲೆ ಕೈ ಹಾಕಿದರು. ಅವಳು ಅರಸನ ಮನೆಯ ಬಳಿಯಲ್ಲಿ ಕುದುರೆ ಬಾಗಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದು ಹಾಕಿದರು.

16ಆಗ ಅವರು ಕರ್ತನ ಜನರಾಗಿರುವ ಹಾಗೆ ಯೆಹೋಯಾದನು ತನಗೂ ಸಮಸ್ತ ಜನರಿಗೂ ಅರಸ ನಿಗೂ ಒಡಂಬಡಿಕೆ ಮಾಡಿದನು.

17ಸಮಸ್ತ ಜನರು ಬಾಳನ ಮನೆಗೆ ಹೋಗಿ ಅದನ್ನು ಕೆಡವಿಹಾಕಿ ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿ ಪೀಠಗಳ ಮುಂದೆ ಕೊಂದುಹಾಕಿದರು.

18ಇದಲ್ಲದೆ ಯೆಹೋ ಯಾದನು ಕರ್ತನ ಆಲಯದ ಪರಿಚಾರಕರನ್ನು ನೇಮಿ ಸಿದನು. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿ ರುವ ಹಾಗೆ ಸಂತೋಷದಿಂದಲೂ ಸಂಗೀತದಿಂದಲೂ ದಾವೀದನಿಂದ ನೇಮಿಸಲ್ಪಟ್ಟ ಹಾಗೆ ದಾವೀದನು ಕರ್ತನ ದಹನಬಲಿಗಳನ್ನು ಅರ್ಪಿಸುವದಕ್ಕೆ ಕರ್ತನ ಆಲಯ ದಲ್ಲಿ ವಿಭಾಗಿಸಿದ ಲೇವಿಯರಾದ ಯಾಜಕರಿಂದ ಅವರನ್ನು ನೇಮಿಸಿದನು.

೨ ಪೂರ್ವಕಾಲವೃತ್ತಾಂತ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी