ಯೆಹೆಜ್ಕೇಲನು 24:3

ತಿರುಗಿ ಬೀಳುವ ಮನೆತನ ದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಸುರಿ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 24

1ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ

2ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಅದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ.

3ತಿರುಗಿ ಬೀಳುವ ಮನೆತನ ದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಸುರಿ.

4ತೊಡೆಯನ್ನೂ ಹೆಗಲನ್ನೂ ಎಲ್ಲಾ ಒಳ್ಳೇ ತುಂಡುಗಳನ್ನೂ ಒಟ್ಟಿಗೆ ಸೇರಿಸಿ ಒಳ್ಳೆ ಎಲುಬುಗಳ ಜೊತೆ ಅದನ್ನು ತುಂಬಿಸಿ;

5ಹಿಂಡಿನಲ್ಲಿ ಶ್ರೇಷ್ಠವಾದ ದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ.

ಯೆಹೆಜ್ಕೇಲನು 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी