ನಾನು ಇನ್ನೂ ನಿಮ್ಮ ಬಳಿಯಲ್ಲಿ ಇರುವಾಗಲೇ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ;
23ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
24ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.
25ನಾನು ಇನ್ನೂ ನಿಮ್ಮ ಬಳಿಯಲ್ಲಿ ಇರುವಾಗಲೇ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ;
26ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ