೨ ಅರಸುಗಳು 9:13

ಆಗ ಅವರು ತ್ವರೆ ಪಟ್ಟು ಪ್ರತಿಯೊಬ್ಬನು ತನ್ನ ವಸ್ತ್ರವನ್ನು ತೆಗೆದು ಮೆಟ್ಟಲುಗಳ ಮೇಲೆ ಹಾಸಿ ಇವನನ್ನು ಕುಳ್ಳಿರಿಸಿ ತುತೂರಿಗಳನ್ನು ಊದಿ -- ಯೇಹುವು ಅರಸನಾಗಿ ದ್ದಾನೆಂದು ಹೇಳಿದರು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 9

11ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಹೊರಟು ಬಂದನು. ಅವರು ಅವನಿಗೆ ಎಲ್ಲವೂ ಕ್ಷೇಮವೋ? ಈ ಹುಚ್ಚನು ನಿನ್ನ ಬಳಿಗೆ ಬಂದದ್ದೇನು ಅಂದರು. ಅವನು ಅವರಿಗೆ--ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ ಅಂದನು.

12ಅದಕ್ಕವರು--ಅದು ಸುಳ್ಳು, ದಯಮಾಡಿ ನಮಗೆ ತಿಳಿಸು ಅಂದರು. ಆದದರಿಂದ ಅವನು--ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿ ಸಿದ್ದೇನೆಂಬದಾಗಿ ಕರ್ತನು ಹೇಳುತ್ತಾನೆಂದು ಹೀಗೆ ನನಗೆ ಹೇಳಿದನು ಅಂದನು.

13ಆಗ ಅವರು ತ್ವರೆ ಪಟ್ಟು ಪ್ರತಿಯೊಬ್ಬನು ತನ್ನ ವಸ್ತ್ರವನ್ನು ತೆಗೆದು ಮೆಟ್ಟಲುಗಳ ಮೇಲೆ ಹಾಸಿ ಇವನನ್ನು ಕುಳ್ಳಿರಿಸಿ ತುತೂರಿಗಳನ್ನು ಊದಿ -- ಯೇಹುವು ಅರಸನಾಗಿ ದ್ದಾನೆಂದು ಹೇಳಿದರು.

14ಹೀಗೆ ನಿಂಷಿಯ ಮಗನಾಗಿ ರುವ ಯೆಹೋಷಾಫಾಟನ ಮಗನಾದ ಯೇಹುವು ಯೆಹೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿ ದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೆಹೋರಾಮನೂ ಎಲ್ಲಾ ಇಸ್ರಾಯೇಲ್ಯರೂ ಗಿಲ್ಯಾ ದಿನ ರಾಮೋತಿನಲ್ಲಿ ಕಾಯುತ್ತಾ ಇದ್ದರು.

15ಆದರೆ ಅರಸನಾದ ಯೋರಾಮನು ಅರಾಮ್ಯರ ಅರಸನಾದ ಹಜಾಯೇಲನ ಸಂಗಡ ಯುದ್ಧಮಾಡುವಾಗ ಅರಾ ಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಸ್ವಸ್ಥಮಾಡಿ ಕೊಳ್ಳುವ ನಿಮಿತ್ತ ಇಜ್ರೇಲಿಗೆ ಹೋಗಿದ್ದನು.

೨ ಅರಸುಗಳು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी