ಯೆರೆಮಿಯ 9:19

ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 9

17ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ.

18ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.

19ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು.

20ಆದಾಗ್ಯೂ ಓ ಸ್ತ್ರೀಯರೇ, ಕರ್ತನ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ; ನಿಮ್ಮ ಕುಮಾರ್ತೆಯರಿಗೆ ಗೋಳಾಟವನ್ನೂ ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.

21ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು, ನಮ್ಮ ಅರಮನೆ ಗಳಲ್ಲಿ ಸೇರಿತು; ಹೊರಗಡೆ ಮಕ್ಕಳನ್ನೂ ಬೀದಿಗಳಲ್ಲಿ ಯೌವ್ವನಸ್ಥರನ್ನೂ ಕಡಿದು ಹಾಕುತ್ತದೆ.

ಯೆರೆಮಿಯ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी