ರೋಮಾಪುರದವರಿಗೆ 8:37

ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 8

35ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?

36ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.

37ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.

38ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿ

39ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.

ರೋಮಾಪುರದವರಿಗೆ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी