ಅಪೊಸ್ತಲರ ಕೃತ್ಯಗಳು 6:9

ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 6

7ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.

8ಸ್ತೆಫನನು ನಂಬಿಕೆಯಿಂದಲೂ ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹತ್ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಿದ್ದನು.

9ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.

10ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು.

11ಅವರು ಸುಳ್ಳು ಸಾಕ್ಷಿ ಹೇಳುವ ಮನುಷ್ಯರನ್ನು ಸೇರಿಸಿಕೊಂಡು--ಇವನು ಮೋಶೆಗೆ ಮತ್ತು ದೇವರಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನು ಹೇಳುವದನ್ನು ನಾವು ಕೇಳಿದ್ದೇವೆ ಎಂದು ಅವರು ಹೇಳಿದರು.

ಅಪೊಸ್ತಲರ ಕೃತ್ಯಗಳು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी