ಯೆಶಾಯ 49:5

ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು.

ಸಂದರ್ಭದೊಂದಿಗೆ ಓದಿ · ಯೆಶಾಯ 49

3ಆತನು ನನಗೆ--ನೀನು ನನ್ನ ಸೇವಕನು, ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು.

4ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.

5ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು.

6ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.

7ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.

ಯೆಶಾಯ 49 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी