ವಿಮೋಚನಕಾಂಡ 19:5

ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 19

3ಮೋಶೆಯು ದೇವರ ಸನ್ನಿಧಿಗೆ ಹೋದನು. ಆಗ ಕರ್ತನು ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ--ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್‌ ಮಕ್ಕಳಿಗೆ ಹೀಗೆ ಹೇಳು--

4ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;

5ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.

6ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್‌ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.

7ಆಗ ಮೋಶೆಯು ಬಂದು ಜನರ ಹಿರಿಯರನ್ನು ಕರೆದು ಕರ್ತನು ತನಗೆ ಆಜ್ಞಾಪಿಸಿದ ಈ ಮಾತುಗ ಳನ್ನೆಲ್ಲಾ ಅವರ ಮುಂದೆ ಇಟ್ಟನು.

ವಿಮೋಚನಕಾಂಡ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी