ಲೂಕನು 6:39

ಆತನು ಒಂದು ಸಾಮ್ಯವನ್ನು ಅವರಿಗೆ ಹೇಳಿ ದನು--ಕುರುಡನು ಕುರುಡನನ್ನು ನಡಿಸಬಲ್ಲನೋ? (ನಡಿಸಿದರೆ) ಅವರಿಬ್ಬರೂ ಕುಣಿಯಲ್ಲಿ ಬೀಳುವದಿ ಲ್ಲವೋ?

ಸಂದರ್ಭದೊಂದಿಗೆ ಓದಿ · ಲೂಕನು 6

37ತೀರ್ಪು ಮಾಡಬೇಡಿರಿ; ಆಗ ನಿಮಗೂ ತೀರ್ಪಾಗುವದಿಲ್ಲ. ಖಂಡಿಸಬೇಡಿರಿ; ಆಗ ನಿಮಗೂ ಖಂಡನೆಯಾಗುವದಿಲ್ಲ. ಕ್ಷಮಿಸಿರಿ; ಆಗ ನಿಮಗೂ ಕ್ಷಮಿಸಲ್ಪಡುವದು.

38ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.

39ಆತನು ಒಂದು ಸಾಮ್ಯವನ್ನು ಅವರಿಗೆ ಹೇಳಿ ದನು--ಕುರುಡನು ಕುರುಡನನ್ನು ನಡಿಸಬಲ್ಲನೋ? (ನಡಿಸಿದರೆ) ಅವರಿಬ್ಬರೂ ಕುಣಿಯಲ್ಲಿ ಬೀಳುವದಿ ಲ್ಲವೋ?

40ತನ್ನ ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಆದರೆ ಪರಿಪೂರ್ಣನಾಗಿರುವ ಪ್ರತಿಯೊಬ್ಬನು ತನ್ನ ಗುರುವಿನಂತೆ ಇರುವನು.

41ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ತಿಳಿದುಕೊಳ್ಳದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯಾಕೆ ನೋಡುತ್ತೀ?

ಲೂಕನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी