ಆದಿಕಾಂಡ 41:16

ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 41

14ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.

15ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು.

16ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.

17ಅದಕ್ಕೆ ಫರೋಹನು ಯೋಸೇಫನಿಗೆ--ನನ್ನ ಕನಸಿನಲ್ಲಿ ಇಗೋ, ನಾನು ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.

18ಆಗ ಇಗೋ, ಕೊಬ್ಬಿದ ಮಾಂಸವಿದ್ದ ಲಕ್ಷಣವಾದ ಏಳು ಹಸುಗಳು ನದಿಯೊ ಳಗಿಂದ ಏರಿಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.

ಆದಿಕಾಂಡ 41 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी