೨ ಸಮುವೇಲನು 6:3

ಆಗ ಅವರು ಗಿಬ್ಯದಲ್ಲಿರುವ ಅಬೀನಾ ದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು ಹೊಸ ಬಂಡಿಯ ಮೇಲೆ ಏರಿಸಿದರು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 6

1ದಾವೀದನು ಇಸ್ರಾಯೇಲಿನಲ್ಲಿ ಆಯಲ್ಪಟ್ಟ ಮೂವತ್ತು ಸಾವಿರ ಜನರನ್ನು ಕೂಡಿಸಿ ಕೊಂಡು ಎದ್ದು ತನ್ನ ಸಂಗಡ ಇದ್ದ ಎಲ್ಲಾ ಜನರನ್ನು ಕರಕೊಂಡು

2ಕೆರೂಬಿಗಳ ಮಧ್ಯದಲ್ಲಿ ವಾಸವಾಗಿ ರುವ ಸೈನ್ಯಗಳ ಕರ್ತನೆಂಬ ಹೆಸರುಳ್ಳ ದೇವರ ಮಂಜೂ ಷವನ್ನು ಯೆಹೂದದ ಬಾಳಾದಿಂದ ತರುವದಕ್ಕೆ ಹೊರಟನು.

3ಆಗ ಅವರು ಗಿಬ್ಯದಲ್ಲಿರುವ ಅಬೀನಾ ದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು ಹೊಸ ಬಂಡಿಯ ಮೇಲೆ ಏರಿಸಿದರು.

4ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಆ ಹೊಸ ಬಂಡಿಯನ್ನು ನಡಿಸಿದರು. ಗಿಬ್ಯ ದಲ್ಲಿದ್ದ ಅಬೀನಾದಾಬನ ಮನೆಯೊಳಗಿಂದ ಅದನ್ನು ಹೊರಗೆ ತಂದು ಅವರು ಅದರ ಸಂಗಡ ಹೋಗು ತ್ತಿರುವಾಗ ಅಹಿಯೋವನು ಮಂಜೂಷದ ಮುಂದೆ ನಡೆದನು.

5ದಾವೀದನೂ ಇಸ್ರಾಯೇಲ್‌ ಮನೆ ಯವರೆಲ್ಲರೂ ತುರಾಯಿ ಮರದಿಂದ ಮಾಡಲ್ಪಟ್ಟ ಸಕಲ ವಾದ್ಯಗಳಾದ ಕಿನ್ನರಿಗಳನ್ನೂ ವೀಣೆಗಳನ್ನೂ ದಮ್ಮಡಿಗಳನ್ನೂ ಸ್ವರಮಂಡಲಗಳನ್ನೂ ತಾಳಗಳನ್ನೂ ಕರ್ತನ ಮುಂದೆ ಬಾರಿಸಿಕೊಂಡು ಹೋದರು.

೨ ಸಮುವೇಲನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी