ಯೆಶಾಯ 27:11

ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.

ಸಂದರ್ಭದೊಂದಿಗೆ ಓದಿ · ಯೆಶಾಯ 27

9ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.

10ಕೋಟೆಯ ಪಟ್ಟಣವಾಗಿದ್ದಾಗ್ಯೂ ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವವು. ಅಲ್ಲಿನ ಚಿಗುರುಗಳನ್ನು ತಿಂದು ಬಿಡು ವವು.

11ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.

12ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.

13ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.

ಯೆಶಾಯ 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी